ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಶ್ವೇತಾ, ನಿಖಿತಾ, ವಿಕ್ಷಿತಾ, ನಿಕ್ಷಿತಾ, ನಿಶ್ಮಿತಾ, ಮನ್ವಿತಾ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ.
ರೇಂಜರ್ ಲೀಡರ್ ವಸಂತಿ ಪಿ. ಇವರ ಮಾರ್ಗದರ್ಶನದಲ್ಲಿ ಶ್ರೀಮತಿ ಲಿಲ್ಲಿ ಪಿ.ವಿ. ಇವರ ನಿರ್ದೇಶನದಲ್ಲಿ, ಪ್ರಾಂಶುಪಾಲರಾದ ಚಂದ್ರಶೇಖರ್ ಇವರ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.