September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

ಪಡಂಗಡಿ: ಇಲ್ಲಿಯ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಪಾದಚಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯು ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಮದ್ಯೆ ಮೃತಪಟ್ಟ ಘಟನೆ ನಡೆದಿದೆ.

ಪಡಂಗಡಿಯ ಲಕ್ಷ್ಮೀ ರವರ ದೂರಿನಂತೆ ಲಕ್ಷ್ಮೀ ರವರ ಪತಿಯ ಸಹೋದರ ಆನಂದ ಎಂಬವರು, ಪಡಂಗಡಿ ಗ್ರಾಮದ ಹೊನ್ನಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಅದೇ ರಸ್ತೆಯಲ್ಲಿ ಆಲ್ಟೋ ಕಾರಿನ ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಅನಂದ ರವರ ಹಿಂಭಾಗಕ್ಕೆ ಡಿಕ್ಕಿ ಹೊಡೆದಿರುತ್ತಾನೆ. ಪರಿಣಾಮ ಆನಂದ ರವರು ರಸ್ತೆಗೆ ಬಿದ್ದು ತೀವ್ರ ಸ್ವರೂಪದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಅಂಬುಲೆನ್ಸ್ ಮುಖೇನ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಆನಂದ ರವರು ದಾರಿಮದ್ಯೆ ಮೃತಪಟ್ಟಿರುವುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2024 ಕಲಂ: 281, 106 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya
error: Content is protected !!