25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ಮತ್ತು ಚಾಮುಂಡೇಶ್ವರಿ ಯುವಕ ಮಂಡಲ ಇದರ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಶ್ರೀ ಕ್ಷೇತ್ರದ ಧರ್ಮದರ್ಶಿಗಳ ಹುಟ್ಟು ಹಬ್ಬದ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆ, ಕಲ್ಲೇರಿ ಮೆಸ್ಕಾಂ ನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಮಂಗಳೂರಿಗೆ ಪದೋನ್ನತಿ ಪಡೆದಿರುವ ಸಂದೀಪ್ ಎಂ ಇವರಿಗೆ ಸನ್ಮಾನ, ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಆ 26 ರಂದು ನೆರವೇರಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಹಾಗೂ ಶ್ರೀ ಕ್ಷೇತ್ರದ ಧರ್ಮದರ್ಶಿಗಳಾದ ಆನಂದ ಗೌಡರ ದಿವ್ಯಹಸ್ತದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾಧಿಗಳು ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಯುವಕ ಮಂಡಲ ಪದಾಧಿಕಾರಿಗಳು, ಸರ್ವ ಸದಸ್ಯರು, ಶ್ರೀ ಕ್ಷೇತ್ರದ ಮನೆಯವರು ಸಹಕರಿಸಿದರು.

Related posts

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya
error: Content is protected !!