April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಭಾಗವಹಿಸಿ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.

ಈ ಪಂದ್ಯಾಟದಲ್ಲಿ ಉತ್ತಮ ಹೊಡೆತಗಾರ್ತಿಯಾಗಿ ಕು.ಯಕ್ಷಿತ, ಉತ್ತಮ ಸೆಟ್ಟರ್ ಆಗಿ ಕು.ಸಿಂಚನ ಇವರು ವೈಯಕ್ತಿಕ ಪ್ರಶಸ್ತಿ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!