25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯ

ಬೆಳ್ತಂಗಡಿ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆ 29.ರಂದು ಶಾಲಾ ಕ್ರೀಡಾ ಸಂಘದ ವತಿಯಿಂದ ರಾಷ್ಟ್ರೀಯ ಕ್ರೀಡೆ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೇಮಲತಾ ಎಂ ಆರ್ ರವರು ಮೇಜರ್ ಧ್ಯಾನ್ ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಧ್ಯಾನ್ ಚಂದ್ ರವರ ಜೀವನ ಮತ್ತು ಸಾಧನೆಯ ಕುರಿತು ವಿದ್ಯಾರ್ಥಿನಿ ಕುಮಾರಿ ಸ್ವಿತಾ ರವರು ಮಾಹಿತಿ ನೀಡಿದರು. ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಬಗ್ಗೆ ವಿದ್ಯಾರ್ಥಿನಿ ಕುಮಾರಿ ನಿಧಿ ಮಾಹಿತಿ ನೀಡಿದರು. ಕುಮಾರಿ ಸಿಂಚನ ಸ್ವಾಗತಿಸಿ, ಕುಮಾರಿ ಹ್ಯಾಪಿ ವಂದಿಸಿದರು. ಕಾರ್ಯಕ್ರಮವನ್ನು ಸಹಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿದರು.

Related posts

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಕೊಕ್ರಾಡಿ ಪದವಿ ಪೂರ್ವ ಕಾಲೇಜಿಗೆ ಶೇ. 97.01 ಫಲಿತಾಂಶ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!