ನಾವೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಅಶೋಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್ ,ಶ್ರೀಮತಿ ವೇದಾವತಿ , ಶ್ರೀಮತಿ ಶಾಂತಿ ಎನ್ ಕೆ ಹಸೈನಾರ್, ಬಾಲಕೃಷ್ಣ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ರಾಜೀವ್ ಸಾಲಿಯಾನ್, ತಾಂತ್ರಿಕ ಸಹಾಯಕ ಅಭಿಯಂತರಾದ ಶ್ರೀಮತಿ ರೇಷ್ಮಾ , IEC ಸಂಯೋಜಕರಾದ ಶ್ರೀಮತಿ ವಿನೀಶಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಪೂಜಾರಿ ಧನ್ಯವಾದವಿತ್ತರು.