28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಭಾಗವಹಿಸಿ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.

ಈ ಪಂದ್ಯಾಟದಲ್ಲಿ ಉತ್ತಮ ಹೊಡೆತಗಾರ್ತಿಯಾಗಿ ಕು.ಯಕ್ಷಿತ, ಉತ್ತಮ ಸೆಟ್ಟರ್ ಆಗಿ ಕು.ಸಿಂಚನ ಇವರು ವೈಯಕ್ತಿಕ ಪ್ರಶಸ್ತಿ ಪಡೆದರು. ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ