23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಆ.29 ರಂದು ಸಂಜೆ ಸಂಭವಿಸಿದೆ.


ಮೃತ ವ್ಯಕ್ತಿ ಸಿಂಗನಾರು ನಿವಾಸಿ ಶ್ರೀನಿವಾಸ (47ವ) ಎಂಬವರಾಗಿದ್ದಾರೆ.
ಮನೆಯಿಂದ ಹೊರಗೆ ಹೋದ ಇವರು ಹಿಂತಿರುಗಿ ಬಾರದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ತೋಟದ ಬದಿಯಲ್ಲಿ ಜೀಗುಜ್ಜೆ ಮರದ ಕೆಳಗೆ ಗಂಭೀರವಾಗಿ ಗಾಯಗೊಂಡು ಬಿದ್ದಿರುವುದು ಕಂಡುಬಂದಿದೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದು ಜೀಗುಜ್ಜೆ ಕೀಳುವ ವೇಳೆ‌ ಇವರು ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ತಂದರೂ ಆವೇಳೆಗೆ ಅವರು ಮೃತಪಟ್ಟಿದ್ದರು ಎಂದು ಮನೆಯವರು ಮಾಹಿತಿ ನೀಡಿದ್ದಾರೆ.


ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಬೆಳ್ತಂಗಡಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ

Related posts

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya
error: Content is protected !!