29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ದೇಣಿಗೆ ಹಸ್ತಾಂತರ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ರೂ. 4,49,355/- ವನ್ನು ವಿದ್ಯಾನಿಧಿಯಾಗಿ ದೇಣಿಗೆ ನೀಡಿರುತ್ತಾರೆ. ಇದನ್ನು ಶಾಲಾ ಶಿಕ್ಷಕರ ವೇತನವನ್ನು ನೀಡುವುದಕ್ಕಾಗಿ ಸದುಪಯೋಗಪಡಿಸಿಕೊಂಡಿದೆ.

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ (ರಿ.) ಸೌತಡ್ಕ ಈ ಹಿಂದೆಯೂ ಅನೇಕ ಬಾರಿ ನಮ್ಮ ವಿದ್ಯಾ ಸಂಸ್ಥೆಗೆ ಧನಸಹಾಯವನ್ನು ಮಾಡುತ್ತಾ ಬರುತ್ತಿದ್ದು, ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಕೈಜೋಡಿಸಿದೆ.

ಶಾಲೆಗೆ ದೇಣಿಗೆಯನ್ನು ನೀಡುವಲ್ಲಿ ವಿಶೇಷ ಕಾಳಜಿ ವಹಿಸಿರುವ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಕಾರ್ಯದರ್ಶಿ ಕುಶಾಲಪ್ಪ ಗೌಡ ಪೂವಾಜೆ ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು, ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related posts

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!