24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಕಳೆಂಜ : ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಂಚಾರಿ ಮತ್ತು ವಿಸ್ತರಣೆ ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ| ವಿಶ್ವನಾಥ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ವಿಶ್ವನಾಥ್ ಹೆಚ್, ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ.,, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಶಾಲಾ ಮುಖ್ಯೋಪಾಧ್ಯಾಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ ಸದಸ್ಯ ಗಂಗಾಧರ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ. ವಾರ್ಡ್ ಸಭೆಯ ವರದಿ ವಾಚಿಸಿದರು. ಗುಮಾಸ್ತ ರಾಜೇಶ್ ಜಮಾ ಖರ್ಚು ವಿವರಿಸಿದರು.

Related posts

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya
error: Content is protected !!