March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ



ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ ಬಗ್ಗೆ ವಿದ್ಯಾರ್ಥಿಗಳಿಗೆ ಅವರ ಸಾಧನೆ ಬಗ್ಗೆ ಹೇಳಿದರು. ಕ್ರೀಡಾ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಶ್ರೀ ವಹಿಸಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕ್ರೀಡಾ ನಾಯಕ ಅಜಯ್ ಧ್ಯಾನ್ ಚಂದ್ರ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳಾದ ಸ್ಪೂರ್ತಿ 10ನೇ ತರಗತಿ ಕಾರ್ಯಕ್ರಮ ಸಂಯೋಜಿಸಿದರು ಹಾಗೂ ಕೌಶಲ್ಯ 10ನೇ ತರಗತಿ ಸ್ವಾಗತಿಸಿದರು. ಪ್ರತೀಕ್ 9ನೇ ತರಗತಿ ಧನ್ಯವಾದವಿತ್ತರು. ಶಾಲಾ ಶಿಕ್ಷಕರ ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Related posts

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!