September 6, 2026
Uncategorized

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ರೂಪಿಸುವಲ್ಲಿ ಯಕ್ಷಗಾನ ಸಹಕಾರಿಯಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ). ಮಂಗಳೂರು. ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯಕ್ಷದ್ರುವ -ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದಲ್ಲಿ ನೃತ್ಯ ಅಭ್ಯಾಸದೊಂದಿಗೆ ಸಿಗುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಜ್ಞಾನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಕೋಶಾಧಿಕಾರಿ ಆದರ್ಶ್, ಯಕ್ಷಗಾನ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ ಉಪಸ್ಥಿತರಿದ್ದರು.


ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya
error: Content is protected !!