September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ಪ್ರತಿಯೊಬ್ಬರು ವೃತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ ಯಶಸ್ಸು ಕಾಣಬಹುದು ಜೊತೆಗ ದುರಭ್ಯಾಸಗಳಿಂದ ಸಹ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು ನಮ್ಮ ವೃತ್ತಿ ಬಗ್ಗೆ ಹೆಮ್ಮೆ ಇರಬೇಕು. ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯತ್ತಮವಾದ ಸೌಲಭ್ಯಗಳೊಂದಿಗೆ ಉಚಿತ ತರಬೇತಿ ನೀಡಿ ಸವಿತಾ ಸಮಾಜದ ಹುಡುಗರಿಗೆ ಅನುಕೂಲ ಮಾಡಿದ್ದಾರೆ ಅವರಿಗೆ ಕೃತಜ್ಞತೆಯನ್ನು ನೀವೇ ಸ್ವ ಉದ್ಯೋಗಿಗಳಾಗಿ ಯಶಸ್ಸು ಕಾಣುವುದರಾ ಮೂಲಕ ಸಲ್ಲಿಸಬೇಕೆಂದು ರಾಯಚೂರು ಮಾಜಿ ರಾಜಸಭಾ ಸದಸ್ಯರಾದ ದಿವಗಂತ ಅಶೋಕ್‌ ಗಸ್ತಿಯವರ ಧರ್ಮಪತ್ನಿ ಶ್ರೀಮತಿ ಸುಮಾ ಅಶೋಕ್‌ ಗಸ್ತಿ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡದೆ ಮೆನ್ಸ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.
ಸಮಾರಂಭದಲ್ಲಿ ಅತಿಥಿಯಾಗಿದ್ದ ರಾಘವೇಂದ್ರ ಇಟಗಿ, ನಿರ್ದೇಶಕರು, ಕರ್ನಾಟಕ ರಾಜ್ಯ ಸವಿತಾ ಇವರು ಮಾತನಾಡಿ ವೃತಿಯನ್ನು ಹೊಸತನ ಇಟ್ಟುಕೊಂಡು ಮುಂದುವರೆಯಿರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ, ರವಿ ಕುಮಾರ್‌ ಕಡೂರು, ಉಪಸ್ಥಿತರಿದ್ದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ *ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ *ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 32 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ವೀರೇಶ, ಬಳ್ಳಾರಿ ಪ್ರಾರ್ಥನೆ ಮಾಡಿದರು, ಪ್ರಭಾಕರ್‌ , ವರಪ್ರಸಾದ್‌ ತರಬೇತಿಯ ಅನುಭವ ಹಂಚಿಕೊಂಡರು.

Related posts

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya
error: Content is protected !!