ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಜನ್ ಮನ್ (ಪ್ರಧಾನಮಂತ್ರಿ ಜನ್ ಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನ್) ಯೋಜನೆಯಡಿ ದ. ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಒಟ್ಟು 10.32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯವನ್ನು ಮುಖ್ಯ ವಾಹಿನಿಗೆ ತರುವ ಈ ಪಿಎಂ ಜನ್ ಮನ್ ಯೋಜನೆಯಡಿ 2024-25ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಗುರುತಿಸಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಈ ಅನುದಾನವನ್ನು ನೀಡಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.