25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 28 ಮತ್ತು 29 ರಂದು ಸರಕಾರಿ ಪ್ರೌಢಶಾಲೆ ಬಳಂಜದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಲೋಚನ ಉದ್ಘಾಟಿಸಿದರು. ನಂತರ ಮೈಟ್ ಕಾಲೇಜಿನ ಆಡಳಿತ ವರ್ಗ, ಅಧ್ಯಾಪಕರಿಗೆ ಬಳಂಜ ಶಾಲೆಯನ್ನು ಎರಡು ದಿವಸದ ಕಾರ್ಯಗಾರಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದಗಳು ಸಲ್ಲಿಸಿದರು. ಮಕ್ಕಳಿಗೆ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಿಕೊಂಡರು.

ವೇದಿಕೆಯಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಬಳೆಂಜದ ನೂತನ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಉಪಸ್ಥಿತರಿದ್ದರು. ಮೈಟ್ ಕಾಲೇಜಿನ ಉಪನ್ಯಾಸಕರಾದ ರಂಜಿತ್ ಎಚ್ ಡಿ ಬಳಂಜ ಪ್ರಾಸ್ತಾವಿಕವಾಗಿ ಮಾತನಾಡಿ ಎರಡು ದಿನ ನಡೆಯುವ ಕಾರ್ಯಗಾರದ ಬಗ್ಗೆ ವಿವರಣೆಯನ್ನು ನೀಡಿದರು.

ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್, ನಿಶಾಂತ್,ತನುಶ್ರೀ, ದೀಪಕ್,ವೀಕ್ಷಿತಾ, ಅಭಿಜ್ಞಾ ಏನ್,ಫಿಯೋನಾ ಲವಿಶ, ಕೆ ವೈಭವ್,ಸುಹಾಸ್ ಮತ್ತು ಅಬ್ದುಲ್ ಖಾದರ್ ಅಫೀಫ್ ಭಾಗವಹಿಸಿದ್ದರು.

ಬಳೆಂಜದ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಕಾರ್ಯಗಾರವು ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಾದ ಗುರುವಾಯನಕೆರೆ, ಕಕ್ಕಿಂಜೆ, ಕಾಶಿಪಟ್ಣದಲ್ಲಿ ಕೂಡ ನಡೆಯಿತು.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya
error: Content is protected !!