23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

ಬೆಳ್ತಂಗಡಿ : ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ರೂಪಿಸುವಲ್ಲಿ ಯಕ್ಷಗಾನ ಸಹಕಾರಿಯಾಗುತ್ತದೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ಭುಜಬಲಿ ಧರ್ಮಸ್ಥಳ ಹೇಳಿದರು.


ಅವರು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ). ಮಂಗಳೂರು. ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯಕ್ಷದ್ರುವ -ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಾ, ಯಕ್ಷಗಾನದಲ್ಲಿ ನೃತ್ಯ ಅಭ್ಯಾಸದೊಂದಿಗೆ ಸಿಗುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಜ್ಞಾನ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.


ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಸಂಚಾಲಕ ಕಿರಣ್ ಶೆಟ್ಟಿ, ಕಾರ್ಯದರ್ಶಿ ಶಿತಿಕಂಠ ಭಟ್, ಕೋಶಾಧಿಕಾರಿ ಆದರ್ಶ್, ಯಕ್ಷಗಾನ ಗುರುಗಳಾದ ದೇವಿ ಪ್ರಸಾದ್ ಗುರುವಾಯನಕೆರೆ ಉಪಸ್ಥಿತರಿದ್ದರು.


ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಧನ್ಯವಾದವಿತ್ತರು. ಉಪನ್ಯಾಸಕ ಮಹಾಬಲ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!