30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕರ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ, ಸೆಮಿಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ತಂಡವನ್ನು ಸೋಲಿಸಿ, ಫೈನಲ್ ನಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಆಗಿ ಸೋಹನ್ ಕೆ ಕೆ ಹಾಗೂ ಬೆಸ್ಟ್ ಪ್ರೈಕರ್ ಮಹಮ್ಮದ್ ರಿಹಾನ್ ಇವರು ಪ್ರಶಸ್ತಿಯನ್ನು ಪಡೆದು ಕೊಂಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಕಾಶ್ರಿ ಡಿ.ಕೋಟ್ಯಾನ್ ಹಾಗೂ ಬೆಸ್ಟ್ ಪ್ರೈಕರ್ ಶ್ರೇಯ ಸಿ.ಎನ್ ಇವರು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ.

Related posts

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya
error: Content is protected !!