September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕರ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ, ಸೆಮಿಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ತಂಡವನ್ನು ಸೋಲಿಸಿ, ಫೈನಲ್ ನಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ತಂಡವನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಆಗಿ ಸೋಹನ್ ಕೆ ಕೆ ಹಾಗೂ ಬೆಸ್ಟ್ ಪ್ರೈಕರ್ ಮಹಮ್ಮದ್ ರಿಹಾನ್ ಇವರು ಪ್ರಶಸ್ತಿಯನ್ನು ಪಡೆದು ಕೊಂಡಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಫೈನಲ್ ನಲ್ಲಿ ದಿವ್ಯಜೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇವರನ್ನು ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಗೋಲ್ ಕೀಪರ್ ಕಾಶ್ರಿ ಡಿ.ಕೋಟ್ಯಾನ್ ಹಾಗೂ ಬೆಸ್ಟ್ ಪ್ರೈಕರ್ ಶ್ರೇಯ ಸಿ.ಎನ್ ಇವರು ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹಾಗೂ ನಿಶ್ಚಿತ್ ಇವರು ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya
error: Content is protected !!