38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

ಉಜಿರೆ: ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ (73ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.30ರಂದು ನಿಧನರಾದರು.

ಸುಮಾರು 35 ವರ್ಷಗಳ ಕಾಲ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರಿಗೆ ಅಪಘಾತ ರಹಿತ ಚಾಲಕ ಪ್ರಶಸ್ತಿ ಪುರಸ್ಕೃತ ಪ್ರಶಸ್ತಿ ಪುರಸ್ಕಾರ ಕೂಡ ಲಭಿಸಿತ್ತು. ಇವರು ನಿವೃತ್ತ ಬಳಿಕವು ಕೆ ಎಸ್ ಆರ್ ಟಿ ಸಿ ಚಾಲಕರಿಗೆ ತರಬೇತಿ ಕೂಡ ನೀಡುತ್ತಿದ್ದರು. ಇವರು ಉಜಿರೆ ಸಂತ ಅಂತೋನಿ ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ, ನಿತ್ಯಾಧರ್ ವಾಳೆಯ ಗುರಿಕಾರರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಎಮಿಲ್ಲಾ ಫೆರ್ನಾಂಡಿಸ್, ಪುತ್ರರಾದ ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್, ಪ್ರಶಾಂತ್ ಫೆರ್ನಾಂಡಿಸ್, ಉಜಿರೆ ಎಸ್ ಎ ಮೆಡಿಕಲ್ ಮಾಲಕ ಪ್ರಕಾಶ್ ಫೆರ್ನಾಂಡಿಸ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya
error: Content is protected !!