27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಲ್ಪಾಡಿ ಶಾಲೆಗೆ ಊಟದ ತಟ್ಟೆ ಕೊಡುಗೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ, ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಾಧವ ಗೌಡ ಮತ್ತು ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಶ್ರೀ ಕ್ಷೇತ್ರದ ಕೊಡುಗೆಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಶ್ರೀಮತಿ ಹರಿಣಾಕ್ಷಿ ಮತ್ತು ಕರಿಯಣ್ಣ ಗೌಡ ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya
error: Content is protected !!