September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ವೇಣೂರು:ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 01ರಂದು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಂಘವು 2023-24ನೇ ಸಾಲಿನಲ್ಲಿ 328 .42 ಕೋಟಿ ವ್ಯವಹಾರ ನಡೆಸಿದ್ದು, ರೂ.1,59,04,380.70 ಲಾಭ ಗಳಿಸಿರುತ್ತದೆ . ಸಂಘದ ಸದಸ್ಯರಿಗೆ ಶೇ.20% ಡಿವಿಡೆಂಡ್ ಘೋಷಿಸಲಾಯಿತು.

ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಸ್ವಾಗತಿಸಿ,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ವಾರ್ಷಿಕ ವರದಿ ಹಾಗೂ ಸಂಘದ ಲೆಕ್ಕಪತ್ರಗಳನ್ನು ಮಂಡಿಸಿದರು .

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಸುಂದರ್ ಪೂಜಾರಿ ,ನಿರ್ದೇಶಕರುಗಳಾದ ರಾಮದಾಸ್ ನಾಯಕ್, ನಾಗಪ್ಪ, ರತ್ನಾಕರ.ಬಿ ,ಸುಧೀರ್ ಭಂಡಾರಿ ,ಗಣಪತಿ ಪ್ರಸನ್ನ , ದೋಗು ನಾಯ್ಕ, ಶ್ರೀಮತಿ ಆಶಾ, ವೀಣಾ ದೇವಾಡಿಗ, ಸಂದೀಪ್ ಹೆಗ್ಡೆ ,ಎಂ. ಆರ್ ಸಂತೋಷ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದೀನ್ , ಲೆಕ್ಕಿಗರಾದ ಭರತ್ ರಾಜ್ .ಕೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಸದಸ್ಯರ ಎಸ್ ಎಸ್ ಎಲ್ ಸಿ ಗಿಂತ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಭತ್ತದ ಕೃಷಿ ಬೆಳೆಯುವ ಸಂಘದ ಸದಸ್ಯರಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಂಘದ ಹಿರಿಯ 12 ಮಂದಿ ಸದಸ್ಯರನ್ನು ಗೌರವಿಸಲಾಯಿತು. ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕರಿಮಣೇಲು ಗ್ರಾಮದ ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ, ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಹರೀಶ್ ನೀರಪಲ್ಕೆ ಹಾಗೂ ಉತ್ತಮ ಪ್ರಗತಿಪರ ಕೃಷಿ ಕೃಷಿಕರಾದ ಗುಣಪಾಲ ಅತಿಕಾರಿ ಕಡಂಬಿಲ ಇವರನ್ನು ಸನ್ಮಾನಿಸಲಾಯಿತು.

ನಿರ್ದೇಶಕರಾದ ಸುಧೀರ್ ಭಂಡಾರಿ ಧನ್ಯವಾದ ಸಲ್ಲಿಸಿದರು.

Related posts

ಉಸ್ತುವಾರಿ ಸಚಿವರ ಸೂಚನೆಗೆ ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್; ಗುರಿಂಗಾನ ರಸ್ತೆ ಬದಿ ಬೀದಿ ದೀಪ ಅಳವಡಿಕೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya
error: Content is protected !!