September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ


ಬೆಳಾಲು: ಮಾಚಾರು ಪ್ರಗತಿ ಯುವಕ ಮಂಡಲ (ರಿ) ಮಾಚಾರು, ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಮಾತನಾಡಿ,’ಶ್ರೀ ಕೃಷ್ಣ ಜನ್ಮಾಷ್ಟಮಿ ಯಂತಹ ಆಚರಣೆಗಳು ಮಕ್ಕಳಲ್ಲಿ ನಮ್ಮ ಸಂಸ್ಕೃತಿ,ಸಂಸ್ಕಾರವನ್ನು ಬೆಳೆಸುವ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿಸುತ್ತದೆ. ಮಾಚಾರಿನ ಪರಿಸರದಲ್ಲಿ ನಡೆಯುತ್ತಿರುವ ಇಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಮಗೆಲ್ಲಾ ಪ್ರೇರಣೆ’ ಎಂದರು.

ವೇದಿಕೆಯಲ್ಲಿ ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಅಧ್ಯಕ್ಷರಾದ ಶ್ರೀ ರಾಮಯ್ಯಗೌಡ,ಭಜನಾ ಮಂಡಳಿಯ ಕಟ್ಟಡ ಸಮಿತಿಯ ಅಧ್ಯಕ್ಷರಾದ ದಿಲೀಪ್ ನಾಯರ್,ಅರ್ಚಕರಾದ ಶಶಿಧರ ರಾವ್ ಕಟ್ಟದಬೈಲು,ಗ್ರಾ.ಪಂ.ಸದಸ್ಯರಾದ ಅನಿಲ್ ಡಿಸೋಜ,ಪ್ರಗತಿ ಯುವಕ ಮಂಡಲದ ಅಧ್ಯಕ್ಷರಾದ ಸೋಮಶೇಖರ್ ಕೆ,ಯುವತಿ ಮಂಡಲದ ಉಪಾಧ್ಯಕ್ಷರಾದ ಶ್ರೀಮತಿ ದಿಶಾ ದಿಲೀಪ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಯುವಕ ಮಂಡಲದ ಕಾರ್ಯದರ್ಶಿ, ಶಿಕ್ಷಕ ಸುರೇಶ್ ಮಾಚಾರ್ ನಿರ್ವಹಿಸಿದರು. ಸದಸ್ಯೆ ಕು.ಜೀವಿತಾ ವಂದಿಸಿದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya
error: Content is protected !!