23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ಜಗತ್ತಿನ ಜೀವ ಜಾಲಗಳು ಕ್ರೀಡೆಯ ಕುರಿತು ತಾಳಿರುವ ಆಸಕ್ತಿ ಮತ್ತು ಉಪಯೋಗವನ್ನು ವಿವರಿಸುತ್ತಾ, ಒಲಂಪಿಕ್ಸ್ ನ್ನಂತಹ ಕ್ರೀಡೆಯಲ್ಲಿ 1900 ರಿಂದ ಇಲ್ಲಿಯವರೆಗೆ ಪಡೆದ ಕ್ರೀಡಾ ಪದಕಗಳ ಕುರಿತು ಹಾಗೂ ಅ ಮೂಲಕ ಭಾರತ ಜಗತ್ತಲ್ಲಿ ಹೇಗೆ ವಿಶ್ವಮಾನ್ಯತೆಯನ್ನು ಪಡೆಯಬಲ್ಲದು ಎಂಬುದನ್ನು ಉಲ್ಲೇಖಿಸಿದರು.

ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಎಂ.ಕೆ ಕಾಶಿನಾಥ್, ಶೈಕ್ಷಣಿಕ ನಿರ್ದೇಶಕರು ಗಂಗಾಧರ್ ಇ ಮಂಡಗಳಲೆ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!