26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ವಿವಿಧ ಕಚೇರಿಗಳಲ್ಲಿ ಒಟ್ಟು 30 ವರ್ಷ 9 ತಿಂಗಳು 11 ದಿನಗಳ ಪರ್ಯಂತ ಸೇವೆ ಸಲ್ಲಿಸಿ ಆ.31ರಂದು ಸ್ವಯಂ ನಿವೃತ್ತಿಯನ್ನು ಪಡೆದ ಶ್ರೀಮತಿ ಶೈಲಜಾ ಎ.ಎನ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಇವರನ್ನು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿ, ಶ್ರೀಮತಿ ಶೈಲಜಾ ಇವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್ ಉಜಿರೆ, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ್, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಖಜಾನೆ ಇಲಾಖೆ ಬೆಳ್ತಂಗಡಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು, ಅಳದಂಗಡಿ ಎಫ್.ಪಿ.ಒ ಅಧ್ಯಕ್ಷ ಹರಿದಾಸ್, ಶ್ರೀಮತಿ ಸುಕನ್ಯಾ, ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಸುರ್ಯ ಮತ್ತಿತರೆ ಪ್ರಮುಖರು ಭಾಗವಹಿಸಿದ್ದರು.

ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ಅಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya
error: Content is protected !!