30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ಮಿನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ಸದಸ್ಯರಾದ ಜಯಾನಂದ ಗೌಡ ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅವರನ್ನು ಸಭೆಯಲ್ಲಿ ಗೌರವಿಸಲಾಯಿತು. ಸಂಘಟನೆಯ ಚಟುವಟಿಕೆಗಳ ಬಗ್ಗೆ ಹಾಗೂ ಹೆದ್ದಾರಿಯ ಕೆಲಸದ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ವರ್ತಕರಿಗೆ ಆಗುವಂತಹ ತೊಂದರೆಗಳನ್ನು ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ತಂದು ಸರಿಪಡಿಸುವ ಬಗ್ಗೆ ಚರ್ಚಿಸಲಾಯಿತು. ಮುಂದಿನ 2 ವರ್ಷದ ಅವಧಿಗೆ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರೋನಾಲ್ಡ್ ಲೋಬೊ, ಪ್ರಧಾನ ಕಾರ್ಯದರ್ಶಿಯಾಗಿ ಲ್ಯಾನ್ಸಿ ಎ ಪಿರೇರಾ, ಕೋಶಾಧಿಕಾರಿಯಾಗಿ ಸುನೀಲ್ ಶೆಣೈ, ಉಪಾಧ್ಯಕ್ಷರಾಗಿ ಶಶಿಧರ ಪೈ ಆಯ್ಕೆಯಾದರು. ಹಾಗೂ 30 ಮಂದಿ ಸದಸ್ಯರನ್ನು ಆಡಳಿತ ಮಂಡಳಿಗೆ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಲೋಬೊ ವರದಿ ಮಂಡಿಸಿದರು. ಕೋಶಾಧಿಕಾರಿ ಸುನೀಲ್ ಶೆಣೈ ಲೆಕ್ಕ ಪತ್ರ ಮಂಡಿಸಿದರು. ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್ ಮಹಾಸಭೆಯ ನೋಟಿಸು ಓದಿ ದಾಖಲಿಸಿದರು. ಸುಶೀಲಾ ಹೆಗ್ಡೆ ಪ್ರಾರ್ಥನೆ ಗೈದರು. ಲ್ಯಾನ್ಸಿ ಎ ಪಿರೇರಾ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!