24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಕೆಸರು ಗದ್ದೆ ಕ್ರೀಡಾಕೂಟ ದೇವನಾರಿ ಗಂಗಯ್ಯ ಮುಗೇರ ಇವರ ಗದ್ದೆಯಲ್ಲಿ ಸೆ.1 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ್ ಜೈನ್ ಬೆಳ್ಳೂರು ಗುತ್ತು ಇವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಗೌರವ ಅಧ್ಯಕ್ಷ ಡಾ| ಪ್ರದೀಪ್ ಎ ಹಾಗೂ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರು ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು, ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಅಧ್ಯಕ್ಷ ಯತೀಶ್ ನೆರೋಲ್ದಪಲ್ಕೆ, ಪ್ರ.ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಗಂಗಯ್ಯ ಮುಗೇರ, ಸುರೇಶ್ ನಾವೂರು, ವಿಜಯ ಗೌಡ ಪಡೆಂಕ್ಕಲ್, ಸುಂದರ ಎ, ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು, ಕ್ರೀಡಾ ಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಂಗನವಾಡಿ ಮಕ್ಕಳಿಗೆ, ಬಾಲಕ, ಬಾಲಕಿಯರ ವಿಭಾಗ, ಮಹಿಳಾ ಹಾಗೂ ಪುರುಷರ ವಿಭಾಗದಲ್ಲಿ ಪ್ರತ್ಯೇಕವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಕ್ರೀಡಾಕೂಟದ ಬಹುಮಾನ ವಿತರಣೆಯನ್ನು ಸೆ. 8 ರಂದು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.


ಸೆ. 07 , 8 ರಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ

Related posts

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya
error: Content is protected !!