27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

ಪುದುವೆಟ್ಟು : ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ಉಳಿಸಿ ಬೆಳೆಸುವಲ್ಲಿ ಜಿನಚೈತ್ಯಾಲಯಗಳು ಪೂರಕ ಮತ್ತು ಪ್ರೇರಕ ಅಂತೆಯೇ ಪುದುವೆಟ್ಟು ಗ್ರಾಮದ 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ| 1008 ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯು ಪಾಳುಬಿದ್ದಿತ್ತು ಈದೀಗ ಈ ಸೀಮೆಯ ಜೈನ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಮತ್ತು ಬಸದಿಗೆ ಸಂಬಂಧಪಟ್ಟ ಎಲ್ಲಾ ಮನೆತನಗಳು ಸೇರಿಕೊಂಡು ಜೀರ್ಣೋದ್ಧಾರ ನಡೆಸಲು ತೀರ್ಮಾನಿಸಿದ್ದು ಇದರ ಶಿಲಾನ್ಯಾಸ ಸಮಾರಂಭ ಆ.28 ರಂದು ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಇವರ ದಿವ್ಯ ಹಸ್ತದಿಂದ ಶಿಲಾನ್ಯಾಸ ಮತ್ತು ವಾಸ್ತು ತಜ್ಞ ಪಾದೂರು ಸುದರ್ಶನ್ ಇಂದ್ರ ಇವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಬಸದಿಗೆ ಸೇರಿರುವ ಎಲ್ಲಾ ಊರ ಪರವೂರ ಶ್ರಾವಕ ಶ್ರಾವಕೀಯರು ಭಾಗವಹಿಸಿದ್ದರು

Related posts

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!