September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಿ. ವಿ. ಸೂರ್ಯನಾರಾಯಣ ಭಟ್ ರವರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ವಿದ್ಯಾರ್ಥಿಗಳ ಶಾರೀರಿಕ, ಮಾನಸಿಕ ಬೆಳವಣಿಗೆಯು ಅತೀಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆಯವರು ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗೆ ಬೇಕಾಗುವ ಸವಲತ್ತುಗಳನ್ನು ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಿದರು. ಅತಿಥಿಗಳಾಗಿ ವಾಣಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ ಬೆಳ್ತಂಗಡಿ ಹಾಗೂ ಸಂಸ್ಥೆಯ ಆಡಳಿತಾಧಿಕಾರಿಯಾದ ಪ್ರಸಾದ್ ಕುಮಾರ್, 2023-24ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಹೆಗ್ಡೆ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ. ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತ ಕಳೆದ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ. ಎ ಇವರು ವಂದಿಸಿದರು ಹಾಗೂ ಶಿಕ್ಷಕಿ ಕು. ಹರಿಣಾಕ್ಷಿ. ಎನ್ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂಧಿಗಳು ಸಹಕರಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!