April 19, 2025
Uncategorized

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವ ಲಯ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ

ನಡ :ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಸೆ. 3ರಂದು ಬೆಳ್ತಂಗಡಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಸೆ. 3ರಂದು ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟಯಶಸ್ವಿಯಾಗಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಜನಾಬ್ ಸಯ್ಯದ್ ಹಬೀಬ್ ರವರು ವಹಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀಯುತ ಸಯ್ಯದ್ ಅಯ್ಯುಬ್ , ಬಂಗಾಡಿ ವಲಯ ಸಂಪನ್ಮೂಲ ವ್ಯಕ್ತಿ ರಮೇಶ್, ಬೆಳ್ತಂಗಡಿ ವಲಯ ಕ್ರೀಡಾ ಸಂಯೋಜಕಿ ಶ್ರೀಮತಿ ಕುಮದಶ್ರೀ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಜನಾಬ್ ಸಯ್ಯದ್ ಹಬೀಬ್ ರವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯನಿಯವರು ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಶ್ವೇತಾ ಇವರು ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಂದರ್ ನಾಯ್ಕ್ ಧನ್ಯವಿತರು . ಈ ಕ್ರೀಡಾ ಕೂಟದ ಫಲಿತಾಂಶವಾಗಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮುಂಡಾಜೆ ಪ್ರೌಢಶಾಲೆ ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪದವಿಪೂರ್ವ ಕಾಲೇಜ್ ಬೆಳ್ತಂಗಡಿ ಇಲ್ಲಿಯ ಪ್ರೌಢಶಾಲಾ ಬಾಲಕರು ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಕೊಯ್ಯೂರು ಮತ್ತು ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ನಾವೂರು ಪಡೆದುಕೊಂಡಿತು

Related posts

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya
error: Content is protected !!