30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ‌‌ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಿಎಮ್ಎಸ್ ಸದಸ್ಯರು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್, ದ.ಕ ಜಿಲ್ಲಾ ಬಿಎಮ್ಎಸ್ ಇದರ ಜಿಲ್ಲಾಧ್ಯಕ್ಷರು, ವಕೀಲರಾದ ಅನಿಲ್ ಕುಮಾರ್ ಯು ರವರುಗಳ ನೇತೃತ್ವದಲ್ಲಿ (KIOCL) ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರುಗಳಾದ ಭಗವಾನ್ ದಾಸ್ ಬಿ ಎನ್, ಕೆಂಚೇಗೌಡ, ಖಜಾಂಚಿ ಉದಯಕುಮಾರ್ ಬಿ ಸಿ ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್, ಪಾಲಯ್ಯ, ಶ್ರೀಮಂದ್ರ ಇವರುಗಳು ಉಪಸ್ಥಿತಿ ಇದ್ದು ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ಮನವಿಯನ್ನು ಸ್ವೀಕರಿಸಿ ಮಾನ್ಯ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ನಾನು ಕೂಡ ಮನವಿ ಮಾಡುತ್ತೇನೆ, ಹಾಗೆಯೇ ಸಚಿವರಾದ ಕುಮಾರಸ್ವಾಮಿ ಯವರು ಸದ್ಯದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡುವ ಸಮಯದಲ್ಲಿ ಈ ಬಗ್ಗೆ ಮಾತುಕತೆ ಮಾಡಿ ಗುಣಾತ್ಮಕವಾಗಿ ಒಟ್ಟಾಗಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ಖಂಡಿತಾ ಮಾಡೋಣ ಎಂದು ಭರವಸೆ ನೀಡಿದರು.

Related posts

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya
error: Content is protected !!