ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.