ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿ ಜನ ಮೆಚ್ಚುಗೆಯ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ಸ್ಪೆಕ್ಟರ್ ಆಗಿ ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿ, ಬಳಿಕ ಪದೋನ್ನತಿ ಹೊಂದಿ ಬೆಳ್ತಂಗಡಿಯಲ್ಲೇ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದರು. ತಮ್ಮ ಅಧಿಕಾರ ಅವಧಿಯಲ್ಲಿ ಕಾನೂನು ಹಾಗೂ ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಹತ್ತಿರದಿಂದ ಕೆಲಸ ಮಾಡಿದ್ದು, ಜನರಿಗೆ ನ್ಯಾಯ ಸಿಗುವಂತೆ ಜಾಗ್ರತೆ ವಹಿಸಿದ್ದಾರೆ.

ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ಸೇವಾ ಪ್ರಶಸ್ತಿಗೆ ಭಾಜನರಾದ ಇವರು, ಪ್ರಸ್ತುತ ಮೂಡಬಿದಿರೆ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಲವಾರು ಜನಪರ ಕಾರ್ಯಕ್ರಮಗಳ ಮುಖಾಂತರ ಕಾನೂನು ಮತ್ತು ನ್ಯಾಯವನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿ “ಖಡಕ್ ಅಧಿಕಾರಿ” ಎಂಬ ಹೆಸರಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿಗಳ ಪ್ರಶಸ್ತಿ ವಿಜೇತರಾದ ಸಂದೇಶ್ ಪಿ.ಜಿ. ಅವರನ್ನು ಮೂಡಬಿದರೆಯಲ್ಲಿ ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಭಾರತೀಯ ರೈಲ್ವೆ ಕುಂದುಕೊರತೆ ಸಮಿತಿ ಸದಸ್ಯ ರಾಜೇಶ್ ಪುದುಶೇರಿ, ಕೆ.ಎಸ್.ಎಂ.ಸಿ.ಎ. ಕೇಂದ್ರ ಸಮಿತಿಯ ಸೇಬಾಷ್ಟಿಯನ್ ಪಿ.ಸಿ., ಎಸ್ರ ಫೌಂಡೇಶನ್ ಮುಖ್ಯಸ್ಥ ಶಿಜು ಸಿ.ವಿ., ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ವಂದನೀಯ ಫಾ. ಶಾಜಿ ಮಾತ್ಯು ಮತ್ತು ಮೂಡಬಿದರೆಯ ಹೊಮ್ಸಕಾರ್ಟ್ ಸಂಸ್ಥೆಯ ಸ್ರಜನ್ ದಾಸ್ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.

Leave a Comment

error: Content is protected !!