September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ರಸ್ತೆ ಒತ್ತುವರಿ ತೆರವುಗೊಳಿಸಿದ್ದು ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯನ್ನು ಶ್ರೀಪತಿ ಹೆಬ್ಬಾರ್ ಎಂಬವರು ಅತಿಕ್ರಮಣ ಮಾಡಿದ್ದು, ತೆರವುಗೊಳಿಸಬೇಕೆಂದು ಗ್ರಾಮಸಭೆಯಲ್ಲಿ ನಿರ್ಣಯಿಸಿದಂತೆ ಸೆ.2ರಂದು ಪೊಲೀಸ್ ಭದ್ರತೆಯಲ್ಲಿ ಗ್ರಾಮ ಪಂಚಾಯತ್ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು.

ಈ ಕುರಿತು ಮಾಹಿತಿ ಪಡೆದ ಆರ್.ಎಫ್.ಒ. ತ್ಯಾಗರಾಜ್, ಸೆ.2ರಂದು ಸಂಜೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ, ಈ ಕುರಿತು ಶೀಘ್ರದಲ್ಲೇ ತಹಶೀಲ್ದಾರ್ ಜತೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಡಿಆರ್‌ಎಫ್‌ಒ ರವಿಚಂದ್ರ ಜತೆಗಿದ್ದರು.

ಸೆ.3ರಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ತಾಲೂಕು ಭೂನ್ಯಾಯ ಮಂಡಳಿಯ ಸದಸ್ಯ ಬೊಮ್ಮಣ್ಣ ಗೌಡ, ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷ ಪೂರ್ಣಾಕ್ಷ, ಅಭಿವೃದ್ಧಿ ಅಧಿಕಾರಿ ರವಿ ಬಸಪ್ಪನಗೌಡ, ಎಲ್ಲ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya
error: Content is protected !!