25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

ಕೊಕ್ಕಡ : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಸೆ.4ರಂದು ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ರವರ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಾಯಕ ಕೃಷಿ ಇಲಾಖಾ ಅಧಿಕಾರಿ ರಂಜಿತ್ ಕುಮಾರ್ ರವರು ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದರು.

ಕೊಕ್ಕಡದ ರಥಬೀದಿ, ನೆಲ್ಯಾಡಿ ಪುತ್ಯೆ, ಕೊಕ್ಕಡ, ಪಟ್ಟೂರು- ಪಟ್ರಮೆ ರಸ್ತೆಯು ಜಿಲ್ಲಾ ಪಂಚಾಯತ್ ಗೆ ಸಂಬಂಧ ಪಟ್ಟಿದ್ದು. ರಸ್ತೆಯ ಸಮಸ್ಯೆಗಳ ಬಗ್ಗೆ ಹಲವು ಸಮಯಗಳಿಂದ ಗ್ರಾಮ ಮಟ್ಟದ ಅಧಿಕಾರಿಗಳಲ್ಲಿ ಹೇಳಿ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಮಟ್ಟದ ಅಧಿಕಾರಿಗಳು ಬರಬೇಕು. ಹಾಗೂ ಗ್ರಾಮ ಸಭೆಗೆ ಪಿ ಡಬ್ಲ್ಯೂ ಡಿ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸದೆ ಇರುವುದರಿಂದ ಗ್ರಾಮ ಸಭೆಯನ್ನು ನಡೆಸುವುದಕ್ಕೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಈ ಬಗ್ಗೆ ಗ್ರಾಮ ಪಂಚಾಯತ್ ಸದಸ್ಯ ಯೋಗೀಶ್ ಅಳಂಬಿಲ ಮಾತನಾಡಿ ಮುಂದಿನ ದಿನಗಳಲ್ಲಿ ಸಂಬಂಧ ಪಟ್ಟ ಎಲ್ಲಾ ಅಧಿಕಾರಿಗಳನ್ನು ಕರಿಸಿ ಸಭೆಯನ್ನು ನಡೆಸುತ್ತೇವೆ ಎಂದು ಅಧ್ಯಕ್ಷರ ಮೇರೆಗೆ ಗ್ರಾಮ ಸಭೆಯನ್ನು ಮುಂದೂಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಪ್ರಭಾಕರ ಗೌಡ, ಸದಸ್ಯರಾದ ಪವಿತ್ರಾ ಕೆ., ವಿಶ್ವನಾಥ ಮಲೆಕುಡಿಯ, ಲತಾ, ವಣಜಾಕ್ಷ ಆಚಾರ್ಯ, ಪುರುಷೋತ್ತಮ ಗೌಡ, ಜಗದೀಶ್ ಪೂಜಾರಿ, ಪ್ರಮೀಳಾ ಜಿ. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya
error: Content is protected !!