May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ಉಜಿರೆ:ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘಟನೆಯ ಉನ್ನತ ಮಟ್ಟದ ಸಮಿತಿಯು 2024ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿಗಾಗಿ ಪ್ರಾಂಶುಪಾಲರಾಗಿ ಆಡಳಿತ ನಿರ್ವಹಣಾ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ. ಕುಮಾರ ಹೆಗ್ಡೆ ಅವರನ್ನು ಆಯ್ಕೆ ಮಾಡಿದೆ.

ಕಾಲೇಜಿನ ಪಠ್ಯ, ಪಠ್ಯೇತರ, ಸಾಂಸ್ಕೃತಿಕ, ಕ್ರೀಡಾ, ವಿಸ್ತರಣಾ ಹಾಗೂ ಸಂಶೋಧನಾ ಕ್ಷೇತ್ರಗಳ ಅಭಿವೃದ್ಧಿಗೆ ರಚನಾತ್ಮಕ ಚಟುವಟಿಕೆಗಳನ್ನು ಸಂಘಟಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಸೆಪ್ಟೆಂಬರ್ 15 ರಂದು ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಜರಗುವ ವಿಶೇಷ ಸಮಾರಂಭದಲ್ಲಿ ಖ್ಯಾತ ಶಿಕ್ಷಣ ತಜ್ಞರು, ರಾಷ್ಟ್ರೀಯ ಮೌಲ್ಯಾಂಕನ ಪರಿಷತ್(ನ್ಯಾಕ್) ನ ಅಧ್ಯಕ್ಷರಾದ ಡಾ. ಅನಿಲ್ ಸಹಸ್ರಬುದ್ಧೆ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.

Related posts

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya
error: Content is protected !!