23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

ತೆಂಕಕಾರಂದೂರು : ಪೆರೋಡಿತ್ತಾಯಕಟ್ಟೆ ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ. ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಪೋಷಕರಿಗೆ ವಿಶೇಷ ಉಚಿತ ತರಬೇತಿ ಶಿಬಿರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಎಸ್ .ಡಿ. ಎಂ. ಸಿ. ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಉದ್ಘಾಟಿಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಲಯನ್ ಕಿರಣ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಉಪಸ್ಥಿತರಿದ್ದರು.


ತರಬೇತಿಯನ್ನು ಲಯನ್ ಸುರೇಶ್ ಎಂ.ಎಸ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿವಿಧ ರೀತಿಯಲ್ಲಿ ಸಿಗುವ ವಿದ್ಯಾರ್ಥಿ ವೇತನಗಳ ಬಗ್ಗೆ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ನಜೀರ್ ರವರು ಮಾಹಿತಿ ನೀಡಿದರು. ಶಾಲಾ ಮಕ್ಕಳು ಪ್ರಾರ್ಥಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೆನಡಿಕ್ಟಾ ಪಾಯ್ಸ್ ರವರು ಪ್ರಾಸ್ತವಿಕವಾಗಿ ಮಾತನಾಡಿ, ಬಂದ ಅತಿಥಿಗಳನ್ನು ಸ್ವಾಗತಿಸಿ, ಶಾಲಾ ಶಿಕ್ಷಕಿ ಶ್ರೀಮತಿ ಚೈತ್ರರವರು ಧನ್ಯವಾದವಿತ್ತರು.

ಈ ಕಾರ್ಯಗಾರದಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು,
ಶಾಲಾ ಶಿಕ್ಷಕ ವೃಂದದವರು, ಬಿಸಿಯೂಟ ಸಿಬ್ಬಂದಿಯವರು ಪುಟಾಣಿಗಳು ಸಹಕರಿಸಿದರು.

Related posts

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!