ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರಿಗೆ ಸನ್ಮಾನ ಮಾಡುವ ಮೂಲಕ ಸೆ.4ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಮಂಡಲದ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ ಭಾಗವಹಿಸಿ ಮೋರ್ಚದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮೋರ್ಚಾದ ಪ್ರಭಾರಿಗಳಾದ ಜಯಾನಂದ ಗೌಡ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಉಮಾ ರಾವ್, ಶ್ರೀಮತಿ ರಾಜೇಶ್ವರಿ, ಶ್ರೀಮತಿ ಸುಧಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಚಂಚಲಾಕ್ಷಿ, ಶ್ರೀಮತಿ ಸಂಗೀತ ಶೆಟ್ಟಿ, ಶ್ರೀಮತಿ ಮಂಜುಳಾ, ಶ್ರೀಮತಿ ವೀಣಾ, ವಿನೋದ, ಶ್ರೀಮತಿ ರಶ್ಮಿ ಪಟವರ್ಧನ್, ಶ್ರೀಮತಿ ಆಶಾಲತಾ ಲಾಯಿಲ, ಶ್ರೀಮತಿ ಪುಷ್ಪ ಕರಿಮಣಿಯಲು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮಾಲಾಡಿ ಸ್ವಾಗತಿಸಿ, ನಿರೂಪಿಸಿ, ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ನೂತನ ಖಾಝಿ ಪದಗ್ರಹಣ ಸಮಾರಂಭ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!