27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಊಟದ ತಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕ್ಷೇತ್ರದಿಂದ ಮಂಜೂರಾಗಿರುವ ಸುಮಾರು 320 ಊಟದ ತಟ್ಟೆಗಳನ್ನು ಮಕ್ಕಳಿಗೆ ವಿತರಣೆ ಮಾಡಲಾಯಿತು. .ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ವೈಖರಿ ಬಗ್ಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು ಮತ್ತು ತಮ್ಮ ಶಾಲೆಗೆ ನೀಡಿದ ಕೊಡುಗೆ ಬಗ್ಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ , ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ,ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಬೆಳ್ತಂಗಡಿ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಆದಂತಹ ಚರಣ್ ಕುಮಾರ್ ,ಹುಣ್ಸೆಕಟ್ಟೆ ಒಕ್ಕೂಟದ ಅಧ್ಯಕ್ಷರಾದ ದಯಾನಂದ ಕೋಟ್ಯಾನ್, ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಪಿ ಮತ್ತು ಸೇವಾ ಪ್ರತಿನಿಧಿ ಜ್ಯೋತಿ ಹಾಗೂ ಶಾಲಾ ಶಿಕ್ಷಕರ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya
error: Content is protected !!