22.2 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮವು ಸೆ.4ರಂದು ನಡೆಯಿತು.

ನೈಜ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಕಾರ್ಯಕ್ರಮದ ಮಹಾ ಅಭಿಯಾನ-2 ಕಾರ್ಯಕ್ರಮದಲ್ಲಿ ಕೊರಗ ಸಮುದಾಯಕ್ಕೆ ಅವಶ್ಯವಿರುವ ಸರ್ಕಾರಿ ದಾಖಲೆಗಳಾದ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಅಭಾಕಾರ್ಡ್ ಗಳನ್ನು ಒದಗಿಸಲು ವಿವಿಧ ಇಲಾಖೆಗಳ ಸಮ್ಮುಖದಲ್ಲಿ ಶಿಬಿರವನ್ನು ಹಮ್ಮಿಕೊಂಡು, ವೈದ್ಯಕೀಯ ತಪಾಸಣೆ ನಡೆಸಿ, ಸೂಕ್ತ ದಾಖಲೆಗಳನ್ನು ಪಡೆಯಲಾಯಿತು.

ಆದಿವಾಸಿ ಕೊರಗ ಸಮುದಾಯದಲ್ಲಿ ಸರಕಾರಿ ದಾಖಲೆಗಳು ಇಲ್ಲದೇ ಇರುವುದರಿಂದ, ಸರಕಾರದ ಯೋಜನೆಗಳನ್ನು ಪಡೆಯುವಲ್ಲಿ ವಿಫಲರಾಗುತ್ತಾರೆ. ಆದುದರಿಂದ ಈ ಜನ್ ಮನ್ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದವರು ಎಲ್ಲಾ ದಾಖಲೆಗಳನ್ನು ಪಡೆಯುವಲ್ಲಿ, ವಿವಿಧ ಇಲಾಖೆಗಳು ಈ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ, ಸುಲಭವಾಗಿ ದಾಖಲೆಗಳನ್ನು ಪಡೆಯಬಹುದಾಗಿದೆ ಎಂದು ಹೇಮಚಂದ್ರ ಸಹಾಯಕ ನಿರ್ದೇಶಕರು ಪಸ್ತಾವಿಸಿದರು.

ಕಾರ್ಯಕ್ರಮದಲ್ಲಿ ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಕರ, ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶೇಷಗಿರಿ ನಾಯಕ, ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹೇಮಚಂದ್ರ ಮತ್ತು ನಾರಾವಿ ಗ್ರಾಮದ ಕೊರಗ ಸಮುದಾಯದವರು ಉಪಸ್ಥಿತರಿದ್ದರು.

ಶ್ರೀಮತಿ ಹೇಮಲತಾ ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿಗಳು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು.

Related posts

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!