ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮವು ಸೆ.4 ರಂದು ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಲಲಿತ, ಸ್ಥಾಪಕ ಅಧ್ಯಕ್ಷ ಬಿ.ಎಲ್ ಸಂತೋಷ್ ಕುಮಾರ್, ಕಾರ್ಯದರ್ಶಿಯಾದ ಗಣೇಶ್ ಆರ್ , ಕೋಶಾಧಿಕಾರಿಯಾದ ಸದಾಶಿವ ಕಕ್ಕೆನ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸೌಮ್ಯ, ಮುಖ್ಯ ಶಿಕ್ಷಕ ಜಗನಾಥ್ ಎಮ್ ಉಪಸ್ಥಿತರಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಲೆಯಲ್ಲಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶ್ರೀಮತಿ ಲಲಿತ ರವರನ್ನು ಗೌರವ ಪೂರಕವಾಗಿ ಸನ್ಮಾನಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು. ಶಾಲೆಯಲ್ಲಿ ಪ್ರಸ್ತುತ ಸೇವೆ ಗೈಯುತ್ತಿರುವ ಎಲ್ಲಾ ಶಿಕ್ಷಕರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಮುಖ್ಯ ಶಿಕ್ಷಕರಾದ ಜಗನ್ನಾಥ ಎಮ್ ರವರನ್ನು ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಶ್ರೀಮತಿ ಲಲಿತ ಇವರ ಸಹಪಾಠಿ ಸಹ ಶಿಕ್ಷಕಿ ಶ್ರೀಮತಿ ಗಂಗಾರಾಣಿ ಜೋಶಿ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್ ಸ್ವಾಗತಿಸಿ, ಸಹ ಶಿಕ್ಷಕ ಕೃಷ್ಣಕುಮಾರ್ ಕಾರ್ಯಕ್ರಮ ನಿರೂಪಿಸಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆ ಧನ್ಯವಾದನಿತ್ತರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು, ಮತ್ತು ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು