23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹರ ಅಂತ್ಯ ಸಂಸ್ಕಾರ ಪತಿಯ ಊರಾದ ಸಾಗರದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
error: Content is protected !!