25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

ಬೆಳಾಲು: ಬೆಳಾಲು ಗ್ರಾಮದ ಜಲಕ್ಕಾರು ನಿವಾಸಿ ಶೀನಪ್ಪ ಗೌಡ (65ವ) ರವರು ಬೆಳಾಲಿನ ಪೀನಾರಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸೆ.5ರಂದು ಸಾವನ್ನಪ್ಪಿದರು.

ಅವರು ಸೆ.4ರಂದು ಸಂಜೆ ಬೆಳಾಲಿನ ಹಾಲಿನ ಡೈರಿಗೆ ಹಾಲು ಹಾಕಿ ವಾಪಾಸು ಮನೆಗೆ ಬರುವ ವೇಳೆಗೆ ಪೀನಾರಿ ಎಂಬಲ್ಲಿ ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾದರು. ಇವರ ಬೈಕ್ ಸ್ಕಿಡ್ ಆಗಿ ಈ ಘಟನೆ ನಡೆಯಿತೊ, ಅಥವಾ ಬೊಲೇರೊ ಡಿಕ್ಕಿ ಹೊಡೆದು ಈ ಘಟನೆ ನಡೆಯಿತೊ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya
error: Content is protected !!