23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದು ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮುಖ್ಯಮಂತ್ರಿ ಪದಕವನ್ನು ಹಸ್ತಾಂತರಿಸಿ ಅಭಿನಂದಿಸಿ ಶುಭ ಹಾರೈಸಿದರು.

ಪ್ರಶಾಂತ್‌ರವರು ಬೈಂದೂರು ಗ್ರಾಮದ ಮರವಂತೆ ನಿವಾಸಿಯಾಗಿದ್ದು 2008ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯಕ್ಕೆ ಸೇರಿದ್ದರು. 2010ರಲ್ಲಿ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಸಾಮಾಜಿಕ ಅರಣ್ಯ ವಲಯಕ್ಕೆ ನೇಮಕಗೊಂಡು ನಂತರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ವನ್ಯಜೀವಿ ನಿಲಯ, ಮೂಡಬಿದ್ರೆ ವಲಯದಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. 2015, ಡಿಸೆಂಬರ್‌ನಲ್ಲಿ ಉಪ್ಪಿನಂಗಡಿ ವಲಯದ ಕಳೆಂಜ ಶಾಖೆಗೆ ವರ್ಗಾವಣೆಗೊಂಡು ಸತತ 8 ವರ್ಷ ಕರ್ತವ್ಯ ನಿರ್ವಹಿಸಿ, 2024ರ ಜುಲೈ 11 ರಂದು ವರ್ಗಾವಣೆಗೊಂಡು ಪ್ರಸ್ತುತ ಮಂಗಳೂರು ಅರಣ್ಯ ಸಂಚಾರಿ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕು.ಕಮಲರವರು ಮೂಲತಃ ಉಜಿರೆ ನಿವಾಸಿ 2005ರಲ್ಲಿ ನೇರ ನೇಮಕಾತಿ ಮೂಲಕ ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕರಾಗಿ ನೇಮಕಗೊಂಡು ಬಳಿಕ ಅರಣ್ಯ ರಕ್ಷಕರಾಗಿ ಪದೋನ್ನತಿಗೊಂಡು ಬೆಳ್ತಂಗಡಿ ವಲಯದ ಚಿಬಿದ್ರಿ ತೋಟತ್ತಡಿ, ನೆರಿಯಾ, ಪುದುವೆಟ್ಟು ಇಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2020ರಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿ ಉಪ್ಪಿನಂಗಡಿ ವಲಯದ ಶಿಬಾಜೆ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಅಲ್ಲಿಂದ ಮಂಗಳೂರಿನ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕಛೇರಿಗೆ ವರ್ಗಾವಣೆಗೊಂಡರು. ಪ್ರಸ್ತುತ ಕಮಲರವರು ವಿಶೇಷ ಕರ್ತವ್ಯ ನಿಮಿತ್ತ ಬೆಳ್ತಂಗಡಿ ವಲಯಕ್ಕೆ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!