25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಸೆ.8 ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ಜರುಗಲಿದೆ.


ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ನೂತನ ಕಛೇರಿ ಮತ್ತು ಗೋದಾಮು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.


ಸಂಘದ ಭದ್ರತಾ ಕೊಠಡಿಯನ್ನು ಶಾಸಕ ಹರೀಶ್ ಪೂಂಜ, ಕ್ಯಾಂಪ್ಕೋ ಖರೀದಿ ಕೇಂದ್ರವನ್ನು ಮಂಗಳೂರು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ನಿಡ್ಲೆ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷೆ ಸುಚರಿತ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬೆಳ್ತಂಗಡಿ ತಾ. ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಂಘ ಅಧ್ಯಕ್ಷ ಶ್ರೀಧರ ಭಿಡೆ, ದ.ಕ ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲ, ಕಳೆಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಗಿರಿಜಾ, ಮಂಗಳೂರು ಸಹಕಾರ ಸಂಘದ ಉಪನಿಬಂಧಕ ರಮೇಶ್ ಹೆಚ್.ಎನ್., ಮಂಗಳೂರು ನಬಾರ್ಡ್ ಎ.ಜಿ.ಎಂ ಶ್ರೀಮತಿ ಸಂಗೀತಾ ಕರ್ತಾ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ ಪ್ರತಿಮಾ ಭಾಗವಹಿಸಲಿದ್ದಾರೆ.


ಅಪರಾಹ್ನ ಗಂಟೆ 2.೦೦ ರಿಂದ ಕೃಷಿ ವಿಚಾರ ಸಂಕಿರಣ, ಹಾಗೂ ಸಂಜೆ ಗಂಟೆ 6.೦೦ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.


ಕೃಷಿಗೆ ಸಂಬಂಧಿಸಿದ ವಿವಿಧ ಪ್ರದರ್ಶನ ಮಳಿಗೆ ಪಾಲ್ಗೊಳ್ಳಲಿದ್ದು ಸದಸ್ಯರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ತಿಳಿಸಿದ್ದಾರೆ.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!