25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

ಕನ್ಯಾಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ – 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 4 ರಂದು ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಾ. ಉದಯಶಂಕರ ಎಚ್. ಜಿ ಆರ್ಥೋಪೆಡಿಕ್ ಸರ್ಜನ್, ಪ್ರಶಮನೀ ಆಸ್ಪತ್ರೆ, ಕೊಪ್ಪ ಇವರು ಮಾಡಿದಂತಹ ಸೇವಾ ಕಾರ್ಯಗಳನ್ನು ಗುರುತಿಸಿ, ಸೇವಾಭಾರತಿ ಸಂಸ್ಥೆಯ ವತಿಯಿಂದ “ಸೇವಾ ಶ್ರೇಷ್ಠ -2024” ಗೌರವವನ್ನು ನೀಡಿ ಸನ್ಮಾನಿಸಲಾಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು “ಸರ್ವ ರೋಗ ಪ್ರಶಮನೀ” ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಆಶಾಕಿರಣವಾಗಿದ್ದಾರೆ. ಸೇವಾಭಾರತಿ ಸಂಸ್ಥೆಯ ಹಲವಾರು ಕಾರ್ಯಚಟುವಟಿಕೆಯಲ್ಲಿ ಕೈಜೋಡಿಸಿದ್ದು ಸಾಮಾಜಿಕ ಸೇವೆ, ಆರೋಗ್ಯ ಸೇವೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಮಾಡಿದ ಅನುಪಮ ಸಾಧನೆಯನ್ನು ಪರಿಗಣಿಸಿ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೌತಡ್ಕದ ವತಿಯಿಂದ ಮನಪೂರ್ವಕವಾಗಿ ಅಭಿನಂದಿಸಿ “ಸೇವಾಶ್ರೇಷ್ಠ 2024” ಗೌರವಕ್ಕೆ ಭಾಜನರಾಗಿದ್ದಾರೆ.

Related posts

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
error: Content is protected !!