23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ : ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ಎಸ್‍ಡಿಪಿಐನವರು ದೂರು ಕೊಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಉಡುಪಿ ಜಿಲ್ಲೆಯ ಕುಂದಾಪುರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರನ್ನು ಸರಕಾರದ ಅಧಿಕೃತ ಸಮಿತಿ ಆಯ್ಕೆ ಮಾಡಿ ಉತ್ತಮ ಶಿಕ್ಷಕ ಹೆಸರು ಪ್ರಕಟಿಸಿ ನಂತರ ತಡೆ ಹಿಡಿದದ್ದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಇದು ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ. ಹನುಮಾನ್ ಚಾಲೀಸಾ ವಿಚಾರದಲ್ಲೂ ಸರಕಾರ ಇದೇ ರೀತಿ ನಡಕೊಂಡಿತ್ತು. ಈ ರೀತಿಯ ನಡವಳಿಕೆ ಸಮಾಜದಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಮಾಡುತ್ತದೆ. ಗಣೇಶೋತ್ಸವ ಪ್ರಸಾದ ವಿತರಣೆ ಬಗ್ಗೆ ವಿಪರೀತ ನಿಯಮ ಮಾಡಿದ್ದೀರಿ. ಸರಕಾರ ಮಾಡುತ್ತಿರುವ ತಾರತಮ್ಯ ತುಷ್ಟಿಕರಣಕ್ಕೆ ಸಂವಿಧಾನ ಅನ್ವಯ ಆಗುದಿಲ್ಲವೇ?


ಇಂಥದ್ದಲ್ಲೆವನ್ನು ಮಾಡುತ್ತಿದ್ದರೆ ಈ ರಾಜ್ಯವನ್ನು ಕಾಪಾಡುವವರು ಯಾರು? ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ಮದ ಏರಿದೆ. ಸಾಂವಿಧಾನಿಕ ವ್ಯವಸ್ಥೆ ಬಿಟ್ಟು ಏನೇ ಮಾಡಿದರೂ ಕೂಡ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತದೆ. ಅಂಥ ಕೆಲಸ ಮಾಡದಿರಿ. ತಪ್ಪುಗಳನ್ನು ಸರಿಪಡಿಸದೆ ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯ ಎಂದು ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Related posts

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ನಾವೂರು : ಕೈಕಂಬ ಬಳಿ ರಸ್ತೆಗೆ ಬಿದ್ದ ಮರ: ನಾವೂರು ಗ್ರಾ.ಪಂ. ಹಾಗೂ ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya
error: Content is protected !!