24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಶೃಂಗಸಭೆ ಕಾರ್ಯಕ್ರಮವು ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಫಲಾಹ್ ಸಭಾಭವನದಲ್ಲಿ ಸೆ.6ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಪೋನ್ಸ್ ಫ್ರಾಂಕೊ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಇನಾಸ್ ರೋಡ್ರಿಗಸ್ ಆಗಮಿಸಿದ್ದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಪ್ರಸ್ತಾವಿಕ ಮಾತನಾಡಿದರು. ಇನಾಸ್ ರೋಡ್ರಿಗಸ್ ಹಾಗೂ ಅಲ್ಪೋನ್ಸ್ ಫ್ರಾಂಕೊ ಅತಿಥಿ ಭಾಷಣ ಮಾಡಿದರು. ಸಭೆಯನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪಕ್ಷದ ಕಾರ್ಯಕರ್ತರುಗಳು ಮತ್ತು ಸ್ಥಳೀಯ ನಾಯಕರುಗಳ ಸಂಘಟಿತ ಚಟುವಟಿಕೆಗಳು ಮತ್ತು ಮುಂದಿನ ದಿನಗಳಲ್ಲಿ ತಳಮಟ್ಟದಲ್ಲಿ ಪಕ್ಷ ಬೆಳವಣಿಗೆ ನಡೆಸಿ ಉತ್ತಮ ನಾಯಕರನ್ನು ಸೃಷ್ಟಿ ಮಾಡಲು ಬೇಕಾಗಿರುವ ಅಂಶಗಳ ಕುರಿತು ಮಾತನಾಡಿದರು.

ಪರ್ಯಾಯ ರಾಜಕೀಯದ ಅನಿವಾರ್ಯತೆ ಮತ್ತು ನಮ್ಮ ಜವಾಬ್ದಾರಿ ಬಗ್ಗೆ ರಿಯಾಝ್ ಫರಂಗಿಪೇಟೆ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಗಳಾದ ಸ್ವಾಲಿ ಮದ್ದಡ್ಕ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಬ್ರಾಂಚ್ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸ್ವಾಗತಿಸಿ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ ಧನ್ಯವಾದಗೈದರು.

Related posts

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya
error: Content is protected !!