23.8 C
ಪುತ್ತೂರು, ಬೆಳ್ತಂಗಡಿ
May 21, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಇವರ ನಿರ್ದೇಶನದಂತೆ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಸರಕಾರೀ ಪದವಿ ಪೂರ್ವ ಕಾಲೇಜು ನಡ ಇಲ್ಲಿ ನಡೆಯಿತು.

ಉದ್ಘಾಟನಾ ಸಮಾರಂಭದಲ್ಲಿ ಡಾll ಪ್ರದೀಪ್ ಕುಮಾರ್ ಅವರು ಮಾತನಾಡುತ್ತಾ “ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸಮಚಿತ್ತದಿಂದ ಆಟವಾಡಬೇಕು.”ಎಂದು ಕಗ್ಗದ ಉಕ್ತಿಯೊಂದನ್ನು ವಿವರಿಸುತ್ತಾ ತಿಳಿಸಿದರು. ನಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಿವಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಮೋಹನ್ ಗೌಡ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚಂದ್ರಶೇಖರ್ ಸ್ವಾಗತಿಸಿ ಶ್ರೀಮತಿ ಲಿಲ್ಲಿ ಪಿ.ವಿ. ವಂದಿಸಿದರು. ಸಮಾರೋಪ ಸಮಾರಂಭದಲ್ಲಿ ಅಜಿತ್ ಆರಿಗ ಇವರು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಶಿಲ್ಪಾ ಡಿ. ಸ್ವಾಗತಿಸಿ ಶ್ರೀಮತಿ ವಸಂತಿ ಪಿ. ನಿರೂಪಿಸಿ, ವಂದಿಸಿದರು.


ಬಾಲಕರ ವಿಭಾಗದಲ್ಲಿ ಎಸ್.ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ಪ್ರಥಮ ಸ್ಥಾನವನ್ನು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ದ್ವಿತೀಯ ಸ್ಥಾನವನ್ನು ಪಡೆಯಿತು.


ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು, ಎಸ್. ಡಿ.ಯಂ. ಪದವಿ ಪೂರ್ವ ಕಾಲೇಜು, ಉಜಿರೆ ದ್ವಿತೀಯ ಸ್ಥಾನವನ್ನು ಪಡೆಯಿತು.

Related posts

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!