ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ 14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವವು ಸೆ.6ರಿಂದ ಪ್ರಾರಂಭಗೊಂಡು ಸೆ.8 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ
ಆಶಾ ಸಾಲಿಯಾನ್ ಸಭಾಭವನದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.
ಇಂದು ಬೆಳಿಗ್ಗೆ ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ, ಅಪ್ಪದ ಪೂಜೆ, ಭಜನಾ ಕಾರ್ಯಕ್ರಮವು ನಡೆಯಿತು.
ಮಧ್ಯಾಹ್ನ ಶ್ರೀ ಗೌರಿ ಗಣೇಶೋತ್ಸವದ ಉದ್ಘಾಟನೆಯನ್ನು ಭಾರತೀಯ ಭೂಸೇನೆ ನಿವೃತ್ತ ಸೇನಾಧಿಕಾರಿ ಮೇಜರ್ ಜನರಲ್ ಎಂ.ವಿ. ಭಟ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಂ.ಕಾಂ. ಪಿಹೆಚ್.ಡಿ. ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಡಾ. ಚಂದ್ರಾವತಿ, ಕಾರ್ಕಳ ಮೆಮೋರಿಯಲ್ ಸರಕಾರಿ ಪ್ರಥಮದರ್ಜೆ ಕಾಲೇಜಿನ ಮಂಜುನಾಥ ಪೈ, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೇಶವ ಗೌಡ ಬೆಳಾಲು ಉಪಸ್ಥಿತರಿದ್ದರು.
ತಾಲೂಕಿನ ನಿವೃತ್ತ ಸೈನಿಕರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು,ಸದಸ್ಯರು, ಉಪಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮಹಿಳೆಯರು ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು, ನಡೆಯಿತು.
ಸಂಜೆ 6 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ತಾಳಮದ್ದಳೆ – ವಾಲಿ ಮೋಕ್ಷ ನಡೆಯಲಿದೆ.