ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಸೆ.8 ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವರು ಸಂಘದ ನೂತನ ಕಛೇರಿ ಮತ್ತು ಗೋದಾಮು ಕಟ್ಟಡವನ್ನು ಉದ್ಘಾಟಿಸಿದರು.
ಸಂಘದ ಭದ್ರತಾ ಕೊಠಡಿಯನ್ನು ಶಾಸಕ ಹರೀಶ್ ಪೂಂಜ, ಕ್ಯಾಂಪ್ಕೋ ಖರೀದಿ ಕೇಂದ್ರವನ್ನು ಮಂಗಳೂರು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ನಿಡ್ಲೆ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ. ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಕೆ.ಎಂ.ಎಫ್. ಅಧ್ಯಕ್ಷೆ ಸುಚರಿತ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ ಜಿ. ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಕೆ.ಎಂ.ಎಫ್ ನಿರ್ದೇಶಕ ಪದ್ಮನಾಭ ಅರ್ಕಜೆ, ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಬಿ.ವಿ ಪ್ರತಿಮಾ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ ಪಿ., ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ , ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಎಚ್. ಸತ್ಯನಾರಾಯಣ ರಾವ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು
ಕಾರ್ತಿಕ್ ತಾಮನ್ಕರ್ ಕೆದಿಹಿತ್ಲ್ ಪ್ರಾರ್ಥಿಸಿದರು. ವಿಷ್ಣು ಮರಾಟೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕೃಷಿ ವಿಚಾರ ಸಂಕಿರಣ, ಹಾಗೂ ಸಂಜೆ ಗಂಟೆ 6.೦೦ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.